alex Certify ಪತಿ ಆತ್ಮಹತ್ಯೆ ಸುದ್ದಿ ಕೇಳಿ ತಾನೂ ನೇಣಿಗೆ ಕೊರಳೊಡ್ಡಿದ ಪತ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿ ಆತ್ಮಹತ್ಯೆ ಸುದ್ದಿ ಕೇಳಿ ತಾನೂ ನೇಣಿಗೆ ಕೊರಳೊಡ್ಡಿದ ಪತ್ನಿ

ಪದೇ ಪದೇ ಕೌಟಿಂಬಿಕ ಕಲಹದಿಂದ ಬೇಸತ್ತ ಪತಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಇತ್ತ ಪತ್ನಿಯೂ ಪತಿಯ ಜೊತೆ ಹೋಗಿದ್ದಾರೆ. ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ನಡೆದಿರುವುದು ಬೆಳಗಾವಿಯ ಬೈಲಹೊಂಗಲ ಪಟ್ಟಣದ ಚೆನ್ನಮ್ಮ ಕ್ರಾಸ್‌ನಲ್ಲಿ. ನಾರಾಯಣ ತಾವರೆ, ಮೀನಾಕ್ಷಿ ನಾರಾಯಣ ತಾವರೆ ಮೃತ ದುರ್ದೈವಿಗಳು. ಮೂಲತಃ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾರಾಯಣ ತಾವರೆ, ಮೀನಾಕ್ಷಿಯವರನ್ನು 13 ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪದೇ ಪದೇ ಇಬ್ಬರ ನಡುವೆ ಜಗಳವಾಗುತ್ತಿತ್ತಂತೆ.

ಇನ್ನು ಈ ದಂಪತಿ ಕೋರ್ಟ್ ಮೆಟ್ಟಿಲೇರಿದ್ದರು ಎನ್ನಲಾಗಿದೆ. ಆದರೆ ಕೋರ್ಟ್‌ನಲ್ಲಿ ಸಹಬಾಳ್ವೆಯಾಗಿ ಬದುಕುತ್ತೇವೆ ಎಂದು ಹೇಳಿ ಬಂದಿದ್ದರಂತೆ. ಇದಾದ ನಂತರ ಮತ್ತೆ ಇಬ್ಬರ ನಡುವೆ ಜಗಳವಾಗಿದೆ. ಈ ಜಗಳ ಇದೀಗ ಆತ್ಮಹತ್ಯೆಯಲ್ಲಿ ಕೊನೆಯಾಗಿದೆ. ಇನ್ನು ಈ ಸಂಬಂಧ ಬೈಲಹೊಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...