alex Certify ‘ಪದವಿ’ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪದವಿ’ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮೇ 30ರೊಳಗೆ ಎಲ್ಲ ಪದವಿ ತರಗತಿಗಳ ಪಠ್ಯಗಳ ಬೋಧನೆಯನ್ನು ಆನ್ಲೈನ್ ಮೂಲಕ ಪೂರ್ಣಗೊಳಿಸಲು ಚಿಂತಿಸಲಾಗಿದ್ದು, ಪರೀಕ್ಷೆ ನಡೆಸುವ ಕುರಿತು ಮೇ 17ರಂದು ಲಾಕ್ಡೌನ್ ಮುಗಿದ ಬಳಿಕ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ.

ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥನಾರಾಯಣ ಈ ವಿಷಯವನ್ನು ತಿಳಿಸಿದ್ದು, ಪ್ರಾಧ್ಯಾಪಕರು ಕಾಲೇಜಿಗೆ ಬಂದು ಆನ್ಲೈನ್ ಮೂಲಕ ಪಾಠ-ಪ್ರವಚನ ಆರಂಭಿಸಲು ಸೂಚಿಸಲಾಗಿದೆ. ಖಾಸಗಿ ಕಾಲೇಜುಗಳು ಇದನ್ನು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ.

ಪದವಿ ಪರೀಕ್ಷೆ ಕುರಿತ ಗೊಂದಲ ಮುಂದುವರೆದಿದ್ದು, ಮಹಾರಾಷ್ಟ್ರ ಮಾದರಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ತೇರ್ಗಡೆ ಮಾಡುವ ಕುರಿತೂ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...