ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿ ಮಾಡಿರುವ ಕಾರಣ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ.
ಹೀಗಾಗಿ ಬಹಳಷ್ಟು ಕಾಲೇಜುಗಳಲ್ಲಿ ಆನ್ಲೈನ್ ಮೂಲಕ ಪಾಠ ಪ್ರವಚನ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.
ಜೂನ್ 15ರೊಳಗೆ ಆನ್ಲೈನ್ ತರಗತಿಗಳನ್ನು ಪೂರೈಸಬೇಕು ಎಂದು ತಿಳಿಸಲಾಗಿದ್ದು, ಜೂನ್ 16 ರಿಂದ 30 ರವರೆಗೆ ಪದವಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರಿಗೆ ರಜೆ ಘೋಷಿಸಲಾಗಿದೆ.
ಉನ್ನತ ಶಿಕ್ಷಣ ಸಂಸ್ಥೆಗಳ ಮುಂದಿನ ಶೈಕ್ಷಣಿಕ ವರ್ಷದ ಕುರಿತಂತೆ ಕೇಂದ್ರ ಸರ್ಕಾರ ಜುಲೈನಲ್ಲಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.