alex Certify ಪರಿಚಿತನೆಂದು ಜೊತೆಯಲ್ಲಿ ಹೋಗಿದ್ದ ಆಂಟಿ; ಯುವಕನ ಕೃತ್ಯ ಕೇಳಿದ್ರೆ ಶಾಕ್ ಆಗ್ತೀರಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಚಿತನೆಂದು ಜೊತೆಯಲ್ಲಿ ಹೋಗಿದ್ದ ಆಂಟಿ; ಯುವಕನ ಕೃತ್ಯ ಕೇಳಿದ್ರೆ ಶಾಕ್ ಆಗ್ತೀರಾ…!

ಹಾವೇರಿ: ಪರಿಚಿತ ವ್ಯಕ್ತಿಯೆಂದು ಯುವಕನೊಬ್ಬನ ಜೊತೆ ಬೈಕ್ ನಲ್ಲಿ ತೆರಳಿದ್ದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಯುವಕ ಆಕೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಇದೀಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಈ ಘೋರ ಘಟನೆ ನಡೆದಿತ್ತು. ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಕೊಲೆ ರಹಸ್ಯ ಬಯಲಾಗಿದೆ.

ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಈರಮ್ಮ ಎಂಬ 48 ವರ್ಷದ ಮಹಿಳೆ ಅದೇ ಗ್ರಾಮದ 26 ವರ್ಷದ ಯಲ್ಲಪ್ಪ ಎಂಬ ಯುವಕನ ಜೊತೆ ಬೈಕ್ ನಲ್ಲಿ ತೆರಳಿದ್ದರು. ಮಾರ್ಗ ಮಧ್ಯೆ ಅರಣ್ಯ ಪ್ರದೇಶದಲ್ಲಿ ಸಾಗುತ್ತಿದ್ದಾಗ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಯುವಕ, ಮಹಿಳೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ.

ಇದೀಗ ಆಡೂರು ಪೊಲೀಸರು ಕಾಮುಕ ಯಲ್ಲಪ್ಪನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...