alex Certify ಪರೀಕ್ಷೆ ಬರೆಯಲಿರುವ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆ ಬರೆಯಲಿರುವ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ..!

ಲಾಕ್‌ಡೌನ್ ಆದಾಗಿನಿಂದಲೂ ಗೊಂದಲಕ್ಕೆ ಬಿದ್ದಿದ್ದ ವಿಚಾರ ಎಂದರೆ SSLC ಮತ್ತು PUC ಪರೀಕ್ಷೆ. ಇವೆರಡನ್ನು ಯಾವಾಗ ಹೇಗೆ ನಡೆಸಬೇಕೆಂಬ ಗೊಂದಲ ಏರ್ಪಟ್ಟಿದ್ದಂತೂ ಸುಳ್ಳಲ್ಲ. ಆದರೆ ಇದೀಗ ಈ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಳ್ಳಲಾಗಿದ್ದು, 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ.

ಆದರೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕೇಂದ್ರ ಸರ್ಕಾರವು 10 ಮತ್ತು PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಹೌದು, ವಿದ್ಯಾರ್ಥಿಗಳ ಯೋಗಕ್ಷೇಮದ ದೃಷ್ಟಿಯಿಂದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಳ್ಕಾ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಅದೇ ರೀತಿ ಕೆಲವೊಂದು ಷರತ್ತುಗಳನ್ನು ವಿಧಿಸಿದ್ದಾರೆ. ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಬೇಕು. ಕಂಟೈನ್ಮೆಂಟ್ ಜೋನ್ ಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ಇಲ್ಲ. ವಿದ್ಯಾರ್ಥಿಗಳು, ಬೋಧಕರು ಮತ್ತು ಪರೀಕ್ಷಾ ಸಿಬ್ಬಂದಿ ಸೇರಿದಂತೆ ಎಲ್ಲರೂ ಮಾಸ್ಕ್ ಧರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಸಾಮಾಜಿಕ ಅಂತರ ಕಡ್ಡಾಯವಾಗಿರಬೇಕು ಎಂಬ ಷರತ್ತುಗಳನ್ನು ಹಾಕಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...