ಪರೀಕ್ಷೆ ಬರೆದ ಬಳಿಕ ಬಹಳಷ್ಟು ಸಂದರ್ಭಗಳಲ್ಲಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಚಾತಕ ಪಕ್ಷಿಗಳಂತೆ ಕಾಯುತ್ತಾರೆ. ಇಂಥದರ ನಡುವೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪರೀಕ್ಷೆ ಮುಗಿದ 24 ಗಂಟೆಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ವಿಶಿಷ್ಟ ದಾಖಲೆ ಮಾಡಿದೆ.
ಬಿಎಸ್ಸಿ ನರ್ಸಿಂಗ್ ನ ಮೊದಲ ಮತ್ತು ಮೂರನೇ ವರ್ಷದ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಫೆಬ್ರವರಿ 8ರಿಂದ 22ರವರೆಗೆ ಲಿಖಿತ ಪರೀಕ್ಷೆ, ಫೆಬ್ರವರಿ 26 ರಿಂದ ಮಾರ್ಚ್ 9ರವರೆಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಮುಗಿದ ಮರುದಿನ ಅಂದರೆ ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟಿಸಲಾಗಿದೆ.
FASTag ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್: ಮಾಸಿಕ ಪಾಸ್ ಗೂ ಅವಕಾಶ
ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಮೌಲ್ಯಮಾಪನ ಮಾಡಿದ ಕಾರಣಕ್ಕಾಗಿ 24ಗಂಟೆಯೊಳಗೆ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿದೆ ಎನ್ನಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಈ ವಿಶಿಷ್ಟ ಸಾಧನೆಗೆ ಈಗ ಪ್ರಶಂಸೆ ವ್ಯಕ್ತವಾಗುತ್ತಿದೆ.