alex Certify ಪರ್ಯಾಯ ನಾಯಕನಾಗಲು ಹೊರಟ ಸವದಿಗೆ ಬಿಗ್ ಶಾಕ್: ಡಿಸಿಎಂ ಕುರ್ಚಿ ಉಳಿಸಿಕೊಳ್ಳುವುದೇ ಸವಾಲು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರ್ಯಾಯ ನಾಯಕನಾಗಲು ಹೊರಟ ಸವದಿಗೆ ಬಿಗ್ ಶಾಕ್: ಡಿಸಿಎಂ ಕುರ್ಚಿ ಉಳಿಸಿಕೊಳ್ಳುವುದೇ ಸವಾಲು…?

ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಈಗ ನಡೆಯುತ್ತಿರುವ ಬೆಳವಣಿಗೆಗಳು ಈ ಮಾತನ್ನು ಸ್ಪಷ್ಟಪಡಿಸುವಂತಿವೆ. ಆದರೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನು ಅಷ್ಟು ಸುಲಭವಾಗಿ ಕೆಳಗಿಳಿಸುವುದು ಸಾಧ್ಯವೇ ಎಂಬ ಪ್ರಶ್ನೆಯೂ ಕೇಳಿಬರುತ್ತಿದೆ.

ಮಾಸ್ ಲೀಡರ್ ಆಗಿರುವ ಯಡಿಯೂರಪ್ಪ ಬಿಜೆಪಿಯ ಮುಂಚೂಣಿಯ ನಾಯಕರು. ಒಂದು ವೇಳೆ ಇವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಇವರಿಗೆ ಪರ್ಯಾಯ ನಾಯಕನ್ಯಾರು ಎಂಬ ಕುತೂಹಲವೂ ಇದೆ. ಕೆಲವರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮುಖ್ಯಮಂತ್ರಿಯಾಗಬಹುದು ಎಂಬ ಲೆಕ್ಕಾಚಾರ ಹಾಕುತ್ತಿದ್ದು, ಇದನ್ನು ಗಮನದಲ್ಲಿಟ್ಟುಕೊಂಡೇ ಬಿಜೆಪಿ ಹೈಕಮಾಂಡ್ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಲಕ್ಷ್ಮಣ ಸವದಿ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿತ್ತು ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ.

ಪ್ರಸ್ತುತ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈಗ ಲಕ್ಷ್ಮಣ ಸವದಿ ಅವರಿಗೆ ದೊಡ್ಡ ಶಾಕ್ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಲಕ್ಷ್ಮಣ ಸವದಿ ಸೇರಿದಂತೆ ಆರು ಮಂದಿ ಸಚಿವರನ್ನು ಕೈಬಿಟ್ಟು ತಮ್ಮ ಆಪ್ತ ಬಳಗದ ಶಾಸಕರಿಗೆ ಸ್ಥಾನ ನೀಡುವ ಲೆಕ್ಕಚಾರ ಹೊಂದಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಇಂತಹ ಕ್ರಮಕ್ಕೆ ಮುಂದಾದರೆ ಇದಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಲಿದೆಯಾ ಎಂಬ ಪ್ರಶ್ನೆಯೂ ಮೂಡಿದೆ. ಒಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯ ರಾಜಕಾರಣ ಹೊಸ ತಿರುವು ಪಡೆದುಕೊಳ್ಳುವ ಎಲ್ಲ ಸಾಧ್ಯತೆಗಳೂ ಇವೆ.

ತಾವು ದೆಹಲಿಯಲ್ಲಿ ಕೆಲ ನಾಯಕರನ್ನು ಭೇಟಿ ಮಾಡಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪನವರು ಆಕ್ರೋಶಗೊಂಡಿರುವುದರಿಂದ ಸಹಜವಾಗಿ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿರುವ ಲಕ್ಷ್ಮಣ ಸವದಿ ಈಗ ಅದನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...