ನೂತನ ಪಿಂಚಣಿ ಯೋಜನೆ (NPS) ಯನ್ನು ಕೈಬಿಟ್ಟು ಹಳೆ ಪದ್ಧತಿಯನ್ನೇ ಮುಂದುವರಿಸಬೇಕೆಂದು ರಾಜ್ಯ ಸರ್ಕಾರಿ ನೌಕರರು ಈ ಹಿಂದಿನಿಂದಲೂ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ಆದರೆ ಈವರೆಗೆ ಇದಕ್ಕೆ ಸ್ಪಂದನೆ ಸಿಕ್ಕಿಲ್ಲ.
ಇದರ ಮಧ್ಯೆ ಕೇಂದ್ರ ಸರ್ಕಾರ, ನೂತನ ಪಿಂಚಣಿ ಯೋಜನೆಯನ್ನು ಕೈಬಿಟ್ಟು ಹಳೆ ಪಿಂಚಣಿ ಯೋಜನೆ ಸೌಲಭ್ಯ ನೀಡುವುದಾಗಿ ಘೋಷಿಸಿದ್ದು, ರಾಜ್ಯ ಸರ್ಕಾರವೂ ಇದನ್ನು ಪಾಲಿಸಬೇಕು ಎಂಬ ಒತ್ತಾಯ ಈಗ ಕೇಳಿ ಬರುತ್ತಿದೆ
ವಿಧಾನ ಪರಿಷತ್ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ಸರ್ಕಾರಿ ನೌಕರರು ನಿವೃತ್ತಿ ನಂತರ ನೆಮ್ಮದಿಯಿಂದ ಬದುಕಬೇಕಾದರೆ ನೂತನ ಪಿಂಚಣಿ ಯೋಜನೆಯನ್ನು ಕೈಬಿಟ್ಟು ಹಳೆ ಪಿಂಚಣಿ ಪದ್ಧತಿಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.