alex Certify ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿ

ರಾಜ್ಯ ಸರ್ಕಾರ 536 ಸಿವಿಲ್ ಪಿಎಸ್ಐ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಇದರ ಮಧ್ಯೆ ಹುದ್ದೆಯ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿಯೊಂದನ್ನು ನೀಡಲಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಸಡಿಲಿಸಲು ನಿರ್ಧರಿಸಲಾಗಿದ್ದು, ಇದರಿಂದ ಬಹಳಷ್ಟು ಮಂದಿಗೆ ಅನುಕೂಲವಾಗಲಿದೆ.

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 28, ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 30 ವರ್ಷಗಳೆಂದು ನಿಗದಿಯಾಗಿದ್ದು, ಇದನ್ನು ಕ್ರಮವಾಗಿ 30 ಹಾಗೂ 32ಕ್ಕೆ ಏರಿಕೆ ಮಾಡಲು ಉನ್ನತ ಮಟ್ಟದ ಸಮಿತಿ ತೀರ್ಮಾನಿಸಿದೆ.

ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಗರಿಷ್ಠ ವಯೋಮಿತಿಯನ್ನು 2ವರ್ಷ ಹೆಚ್ಚಿಸಲು ನಿರ್ಣಯ ಕೈಗೊಳ್ಳಲಾಗಿದ್ದು, ಸಚಿವ ಸಂಪುಟದ ಒಪ್ಪಿಗೆ ಪಡೆಯಲು ತಿದ್ದುಪಡಿ ಕರಡು ಸಿದ್ಧವಾಗುತ್ತಿದೆ. ಈ ತಿದ್ದುಪಡಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದರೆ ಸಾವಿರಾರು ಮಂದಿ ಆಕಾಂಕ್ಷಿಗಳಿಗೆ ಅವಕಾಶ ಸಿಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...