ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಗುರುವಾರದಂದು ನಡೆಸಲಾಗಿತ್ತು. ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಪರೀಕ್ಷೆಯ ಕೀ ಉತ್ತರಗಳನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ www.pue.kar.nic.in ನಲ್ಲಿ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.