ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿತ್ತು. ಹೀಗಾಗಿ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿತ್ತು.
ಇದೀಗ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಮಧ್ಯೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮಹತ್ವದ ಸೂಚನೆಯನ್ನು ಹೊರಡಿಸಿದ್ದು, ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಸಲು ನಿರ್ದೇಶಿಸಿದ್ದಾರೆ.
ಕಳೆದ ಮೂರು ತಿಂಗಳ ಅಂತರದಿಂದಾಗಿ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುವ ಕಾರಣ ಆನ್ಲೈನ್ ಮೂಲಕ ಪುನರ್ಮನನ ತರಗತಿ ನಡೆಸಬೇಕೆಂದು ಸೂಚಿಸಲಾಗಿದ್ದು, ಈ ಕುರಿತು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಇಂಗ್ಲಿಷ್ ಉಪನ್ಯಾಸಕರು ವಿಶೇಷ ಗಮನ ಹರಿಸಬೇಕೆಂದು ತಿಳಿಸಲಾಗಿದೆ.