ಕೊರೊನಾ ಕಾರಣಕ್ಕಾಗಿ ಶಾಲಾ ಕಾಲೇಜುಗಳು ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇದರ ಮಧ್ಯೆ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಇದೀಗ ಪಿಯು ಉಪನ್ಯಾಸಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಪ್ರಥಮ ಪಿಯು ಪೂರಕ ಪರೀಕ್ಷೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಜುಲೈ 13ರಿಂದ ಎಲ್ಲ ಉಪನ್ಯಾಸಕರು ತಮ್ಮ ಕಾಲೇಜುಗಳಿಗೆ ತೆರಳಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಹೇಳಿ ತರಗತಿ ತೆಗೆದುಕೊಳ್ಳಬಾರದು ಎಂದು ತಿಳಿಸಲಾಗಿದ್ದು ಆದರೆ ಆನ್ಲೈನ್ ತರಗತಿ ನಡೆಸಿ ಅವರ ಕಲಿಕೆಗೆ ಉತ್ತೇಜನ ನೀಡಬಹುದಾಗಿದೆ ಎಂದು ಸೂಚಿಸಿದೆ.