ಈವರೆಗೆ ಪ್ರಥಮ ಪಿಯುಸಿ ಪರೀಕ್ಷೆ ಮುಗಿದ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ ದೇಶದಲ್ಲಿ ವಕ್ಕರಿಸಿರುವ ಕೊರೊನಾ ಮಹಾಮಾರಿ ಶೈಕ್ಷಣಿಕ ಚಟುವಟಿಕೆಗಳನ್ನು ಬುಡಮೇಲು ಮಾಡಿದೆ. ಈ ಹಿನ್ನೆಲೆಯಲ್ಲಿ ಪಿಯು ಪರೀಕ್ಷೆ ಕುರಿತಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದ ಬಳಿಕ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಶೈಕ್ಷಣಿಕ ಚಟುವಟಿಕೆಯ ವೇಳಾಪಟ್ಟಿಯನ್ನು ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಕಳುಹಿಸಿಕೊಡಲಾಗಿದೆ.
ಗುತ್ತಿಗೆ ವೈದ್ಯರಿಗೆ ಗುಡ್ ನ್ಯೂಸ್: ಸೇವೆ ಮುಂದುವರಿಸಲು ರಾಜ್ಯ ಸರ್ಕಾರದ ಆದೇಶ
ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24ರಿಂದ ಆರಂಭವಾಗಲಿದ್ದು, ಜೂನ್ 16ರಂದು ಕೊನೆಯಾಗಲಿದೆ. ಜೂನ್ 18 ರಿಂದ ಜುಲೈ 13 ರವರೆಗೆ ಮೌಲ್ಯಮಾಪನ ಕಾರ್ಯ ನಡೆಯಲಿದೆ ಎಂದು ತಿಳಿಸಲಾಗಿದೆ. ಇನ್ನು ಪ್ರಥಮ ಪಿಯುಸಿ ಪರೀಕ್ಷೆಗಳು ಜುಲೈ 5 ರಿಂದ ಜುಲೈ 17 ರವರೆಗೆ ನಡೆಯಲಿದ್ದು, ಮೌಲ್ಯಮಾಪನ ಕಾರ್ಯ ಜುಲೈ 19 ರಿಂದ ಜುಲೈ 28 ರವರೆಗೆ ನಡೆಯಲಿದೆ.