alex Certify ಪಿಯು ಪರೀಕ್ಷೆ ಕುರಿತಂತೆ ಇದೇ ಮೊದಲ ಬಾರಿಗೆ ಕೈಗೊಳ್ಳಲಾಗಿದೆ ಈ ‘ತೀರ್ಮಾನ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯು ಪರೀಕ್ಷೆ ಕುರಿತಂತೆ ಇದೇ ಮೊದಲ ಬಾರಿಗೆ ಕೈಗೊಳ್ಳಲಾಗಿದೆ ಈ ‘ತೀರ್ಮಾನ’

ಈವರೆಗೆ ಪ್ರಥಮ ಪಿಯುಸಿ ಪರೀಕ್ಷೆ ಮುಗಿದ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ ದೇಶದಲ್ಲಿ ವಕ್ಕರಿಸಿರುವ ಕೊರೊನಾ ಮಹಾಮಾರಿ ಶೈಕ್ಷಣಿಕ ಚಟುವಟಿಕೆಗಳನ್ನು ಬುಡಮೇಲು ಮಾಡಿದೆ. ಈ ಹಿನ್ನೆಲೆಯಲ್ಲಿ ಪಿಯು ಪರೀಕ್ಷೆ ಕುರಿತಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದ ಬಳಿಕ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಶೈಕ್ಷಣಿಕ ಚಟುವಟಿಕೆಯ ವೇಳಾಪಟ್ಟಿಯನ್ನು ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಕಳುಹಿಸಿಕೊಡಲಾಗಿದೆ.

ಗುತ್ತಿಗೆ ವೈದ್ಯರಿಗೆ ಗುಡ್ ನ್ಯೂಸ್: ಸೇವೆ ಮುಂದುವರಿಸಲು ರಾಜ್ಯ ಸರ್ಕಾರದ ಆದೇಶ

ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24ರಿಂದ ಆರಂಭವಾಗಲಿದ್ದು, ಜೂನ್ 16ರಂದು ಕೊನೆಯಾಗಲಿದೆ. ಜೂನ್ 18 ರಿಂದ ಜುಲೈ 13 ರವರೆಗೆ ಮೌಲ್ಯಮಾಪನ ಕಾರ್ಯ ನಡೆಯಲಿದೆ ಎಂದು ತಿಳಿಸಲಾಗಿದೆ. ಇನ್ನು ಪ್ರಥಮ ಪಿಯುಸಿ ಪರೀಕ್ಷೆಗಳು ಜುಲೈ 5 ರಿಂದ ಜುಲೈ 17 ರವರೆಗೆ ನಡೆಯಲಿದ್ದು, ಮೌಲ್ಯಮಾಪನ ಕಾರ್ಯ ಜುಲೈ 19 ರಿಂದ ಜುಲೈ 28 ರವರೆಗೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...