ಬೆಂಗಳೂರು: ಪೆಟ್ರೋಲ್-ಡೀಸೆಲ್, ಗ್ಯಾಸ್ ಸಿಲಿಂಡರ್ ದರ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ಮುಂದಾಗಿದೆ.
ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದೆ ಪ್ರಸ್ತಾಪ ಇಡಲು ನಿರ್ಧರಿಸಿದೆ.
ಜನ ಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್: ತಿಂಗಳ ಅವಧಿಯಲ್ಲೇ ಮೂರನೇ ಬಾರಿಗೆ ಸಿಲಿಂಡರ್ ಬೆಲೆ ಏರಿಕೆ
ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಸುಳಿವು ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಹಾಗಾಗಿ ಬಸ್ ಪ್ರಯಾಣ ದರ, ಅದರಲ್ಲೂ ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಜೊತೆ ಚರ್ಚೆ ನಡೆಸುತ್ತಿದ್ದು, ಸಿಎಂ ಒಪ್ಪಿದರೆ ರ ಹೆಚ್ಚಳ ಮಾಡಲಾಗುವುದು ಎಂದು ಹೇಳಿದರು.