ಬೆಂಗಳೂರು: ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದರ ಗಗನಮುಖಿಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಫೆಬ್ರವರಿ 26ರಂದು ಸರಕು ಸಾಗಣೆ ಟ್ರೇಡರ್ಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ.
ಈ ಪ್ರತಿಭಟನೆಗೆ ಇದೀಗ ಲಾರಿ ಮಾಲೀಕರ ಸಂಘ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಫೆ.26ರಂದು ಹೈವೇಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.
SBI ಈ ಯೋಜನೆಯಲ್ಲಿ ಸಿಗಲಿದೆ ತಿಂಗಳಿಗೆ 10 ಸಾವಿರ ರೂ.
ಒಟ್ಟಾರೆ ಫೆ.26ರಂದು ದೇಶದ ವಿವಿಧ ಭಾಗಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮತ್ತೆ ಭುಗಿಲೇಳಲಿದೆ.