ಬೆಂಗಳೂರು: ಇತ್ತೀಚೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿಸಿ ಜನರಿಂದ ಹಣ ದೋಚುತ್ತಿದ್ದ ಖದೀಮರ ಪ್ರಕರಣ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿ ಹೆಸರಲ್ಲೂ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಖದೀಮರು ಹಣ ವಂಚನೆಗೆ ಮುಂದಾಗಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಆನೇಕಲ್ ನಿಂದ ವರ್ಗಾವಣೆಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಎಂಬುವವರ ಹೆಸರಲ್ಲಿ ಫೇಸ್ ಬುಕ್ ಖಾತೆ ತೆರೆದ ಖದೀಮರು, ಫೋಟೋ ಹಾಗೂ ಕೆಲ ದಾಖಲೆಗಳನ್ನು ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿ ಹಣ ವಂಚಿಸುವ ಕೆಲಸ ಮಾಡಿದ್ದಾರೆ. ಗೂಗಲ್ ಪೇ ಮೂಲಕ ವಿನಯ್ ಕುಮಾರ್ ಎಂಬುವವರ ಖಾತೆಗೆ ಹಣ ವರ್ಗಾವಣೆ ಮಾಡುವಂತೆ ಆರೋಪಿಗಳು ಮನವಿ ಮಾಡಿದ್ದಾರೆ.
ಇದೀಗ ನಕಲಿ ಫೇಸ್ ಬುಕ್ ಅಕೌಂಟ್ ಮೂಲಕ ವಂಚನೆ ನಡೆಸುತ್ತಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.