ಕೊರೊನಾ ಸೋಂಕು ಮಕ್ಕಳಿಗೆ ಅಷ್ಟಾಗಿ ಅಪಾಯವಿಲ್ಲ ಎಂದು ಹೇಳಲಾಗಿತ್ತು. ಆದರೆ ಇದೀಗ ಕೊರೊನಾ ಸೋಂಕು ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡಬಲ್ಲದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಸೋಂಕು ಬಂದು ಹೋದ ಬಳಿಕ ಮಕ್ಕಳಿಗೆ ಗಂಡಾಂತರವಾಗಿ ಪರಿಣಮಿಸುವ ಸಾಧ್ಯತೆ ದಟ್ಟವಾಗಿದೆ. ರಾಜ್ಯದಲ್ಲಿ 19 ವರ್ಷದ ಒಳಗಿನ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚು ಅಪಾಯಕಾರಿಯಾಗಿರುವುದು ಕಂಡು ಬಂದಿದೆ.
ಈಗಾಗಲೇ ರಾಜ್ಯದಲ್ಲಿ 83 ಸಾವಿರದ 13 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, 19 ವರ್ಷದೊಳಗಿನ 67 ಮಕ್ಕಳು ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಮಕ್ಕಳಲ್ಲಿ 2-4 ವಾರಗಳಲ್ಲಿ ಬೇರೆ ಬೇರೆ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಜ್ವರ, ವಾಂತಿ, ಚರ್ಮದ ಕಾಯಿಲೆ ಕಂಡು ಬರುತ್ತಿದ್ದು, ಹಲವರ ಜೀವಕ್ಕೆ ಅಪಾಯವಾಗಿ ಪರಿಣಮಿಸಿದೆ.