alex Certify ಪ್ರತಿ ಪ್ರಾಣವೂ ಅಮೂಲ್ಯ; ಶಿವಮೊಗ್ಗ ದುರಂತಕ್ಕೆ ಕಿಚ್ಚ ಸುದೀಪ್ ಕಂಬನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ಪ್ರಾಣವೂ ಅಮೂಲ್ಯ; ಶಿವಮೊಗ್ಗ ದುರಂತಕ್ಕೆ ಕಿಚ್ಚ ಸುದೀಪ್ ಕಂಬನಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ 5 ಕಾರ್ಮಿಕರು ಮೃತಪಟ್ಟಿದ್ದು, ದುರಂತದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಶಿವಮೊಗ್ಗದ ಹುಣಸೋಡಿಯಲ್ಲಿ ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಶಾಂತಿ ಸಿಗಲಿ. ಪ್ರತಿ ಪ್ರಾಣವೂ ಅಮೂಲ್ಯ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.

ಶಿವಮೊಗ್ಗದ ಹುಣಸೋಡಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಕ್ವಾರಿಯಲ್ಲಿ ಲಾರಿಯಲ್ಲಿ ತುಂಬಿದ್ದ ಜಿಲೆಟಿನ್ ಸ್ಫೋಟಗೊಂಡ ಪರಿಣಾಮ 5 ಕಾರ್ಮಿಕರು ಮೃತಪಟ್ಟಿದ್ದರು. ಲಾರಿಯಲ್ಲಿದ್ದ 50 ಜಿಲೆಟಿನ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹ ಛಿದ್ರ ಛಿದ್ರಗೊಂಡಿದ್ದು, ಮೃತರ ಬಗ್ಗೆ ಸಂಪೂರ್ಣ ಮಾಹಿತಿ ಸಿಗದ ಸ್ಥಿತಿಯಲ್ಲಿ ಮೃತ ದೇಹಗಳು ಚೂರು ಚೂರಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...