ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಯಾದ ಬಳಿಕ ರಾಜ್ಯದ ಹಲವು ಭಾಗಗಳಿಂದ ಪ್ರತ್ಯೇಕ ಜಿಲ್ಲೆಯ ಕೂಗು ಕೇಳಿಬರುತ್ತಿದೆ. ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಎಲ್ಲ ಅನುಕೂಲತೆಗಳನ್ನು ಹೊಂದಿರುವ ಶಿರಸಿಯನ್ನು ಸಹ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂಬ ಆಗ್ರಹ ಈಗ ಕೇಳಿ ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಫೆಬ್ರವರಿ 24ರ ನಾಳೆ ಶಿರಸಿ ಬಂದ್ ಗೆ ಕರೆ ನೀಡಲಾಗಿದ್ದು, 60ಕ್ಕೂ ಹೆಚ್ಚು ಸಂಘಟನೆಗಳು ಈ ಬಂದ್ ಗೆ ಬೆಂಬಲ ನೀಡಿವೆ. ಶಿರಸಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಸಹ ಬಂದ್ ಆಚರಿಸಲು ತೀರ್ಮಾನಿಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ನಡೆಸಲಾಗುತ್ತದೆ.
ಶಿಕ್ಷಣ ವಂಚಿತ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಯ್ತು ಈ ತಾತ್ಕಾಲಿಕ ಕಟ್ಟಡ…!
ಫೆಬ್ರವರಿ 24ರ ಬೆಳಗ್ಗೆ 10 ಗಂಟೆಗೆ ಶಿರಸಿ ನಗರದ ಹಳೆ ಬಸ್ ನಿಲ್ದಾಣದ ಅಂಚೆ ವೃತ್ತದಿಂದ ಬೃಹತ್ ಮೆರವಣಿಗೆ ನಡೆಯಲಿದ್ದು, ಬಳಿಕ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಮನವಿ ನೀಡಲಾಗುತ್ತದೆ ಎಂದು ಶಿರಸಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ ತಿಳಿಸಿದ್ದಾರೆ.