ಬೆಂಗಳೂರು: ದೇಶಾದ್ಯಂತ ತೈಲ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್, ಡೀಸೆಲ್ ದರ ಗಗನಮುಖಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದ ಕಿರುತೆರೆ ನಟ, ತುಳು ಚಿತ್ರ ನಿರ್ದೇಶಕ ವಿಜಯ್ ಶೋಭರಾಜ್ ಪಾವೂರ ವಿರುದ್ಧ ನೆಟ್ಟಿಗರು ಗುಡುಗಿದ್ದಾರೆ.
ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ನಮೋ ನಮಗೆ ಮೋಸ, ಪೆಟ್ರೋಲ್ ಧಗಧಗ, ಡೀಸೆಲ್ ಭಗಭಗ ಎಂದು ಬರೆದುಕೊಂಡಿದ್ದರು. ಇದಕ್ಕೆ ನಮೋ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಬಗ್ಗೆ ಮಾತನಾಡಿದರೆ ನಿಮ್ಮ ಹೊಸ ತುಳು ಸಿನಿಮಾಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ.
ಚಿತ್ರರಂಗದ ಒತ್ತಡಕ್ಕೆ ಮಣಿದ ಸರ್ಕಾರ – ಶೇ. 100 ಪ್ರೇಕ್ಷಕರಿಗೆ ಅವಕಾಶ
ನಮೋ ಅಭಿಮಾನಿಗಳ ಎಚ್ಚರಿಕೆ ಬೆನ್ನಲ್ಲೇ ವಿಜಯ್ ಸಾಮಾಜಿಕ ಜಾಲತಾಣಗಳಿಂದ ತಮ್ಮ ಪೋಸ್ಟ್ ಡಿಲಿಟ್ ಮಾಡಿದ್ದಾರೆ.