alex Certify ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

2020 ರ ಮುಂಗಾರು ಹಂಗಾಮಿನ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ಯನ್ನು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ. ಸಂಸ್ಥೆ ವತಿಯಿಂದ ರಾಜ್ಯದ ಆರು ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತಿದ್ದು, ರೈತರಿಗೆ ಈ ಕುರಿತು ಮುಖ್ಯ ಮಾಹಿತಿ ಇಲ್ಲಿದೆ.

ಚಿಕ್ಕಬಳ್ಳಾಪುರ, ಹಾಸನ, ಹಾವೇರಿ, ಮಂಡ್ಯ, ಶಿವಮೊಗ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗುತ್ತಿದ್ದು, ಇಳುವರಿ ಆಧಾರಿತ ಬೆಳೆ ವಿಮಾ ಯೋಜನೆಯಾಗಿರುವ ಇದರಲ್ಲಿ ಒಟ್ಟು 34 ಮುಂಗಾರು ಬೆಳೆಗಳು ಒಳಗೊಳ್ಳಲಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಪಾವತಿಸಬೇಕಾದ ವಿಮಾ ಕಂತಿನ ಮೇಲೆ ರಿಯಾಯಿತಿಯನ್ನು ನೀಡುತ್ತಿದ್ದು, ವಿಮೆ ನೀಡುವ ಸಂದರ್ಭದಲ್ಲಿ ಬಿತ್ತನೆ / ನಾಟಿ ಕಾಲಕ್ಕೆ ಆದ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುತ್ತದೆ.

ನಿಮಗೇನಾದರೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಅಥವಾ ಗ್ರಾಹಕರು ದೂರುಗಳನ್ನು ಸಲ್ಲಿಸಬೇಕಾದಲ್ಲಿ ಸಹಾಯವಾಣಿ 18004250505 ಕರೆ ಮಾಡಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಅಥವಾ ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ. ವಲಯ ಕಚೇರಿ, ೩ನೇ ಮಹಡಿ, ನಂ.18, ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಕಟ್ಟಡ, ನೃಪತುಂಗ ರಸ್ತೆ, ಹಡ್ಸನ್ ವೃತ್ತ. ದೂರವಾಣಿ: 180 22115158/5390 ಇಲ್ಲಿಗೂ ಸಂಪರ್ಕ ಮಾಡಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...