ಬೆಂಗಳೂರು: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರದ ಹಾದಿ ಹಿಡಿದಿದ್ದಾರೆ. ನಾಳೆ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಸಂಘ ಕರೆ ನೀಡಿದೆ.
ಇದರ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ನೌಕರರು ಇಂದು ಮಧ್ಯಾಹ್ನದಿಂದಲೇ ಮುಷ್ಕರಕ್ಕೆ ಕರೆ ನೀಡಿದ್ದು, ಬಸ್ ಸಂಚಾರ ಸ್ಥಗಿತಗೊಳಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನದಿಂದ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯುವುದು ಅನುಮಾನವಾಗಿದೆ.
25 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅವಕಾಶ ಕೋರಿದ ಸಿಎಂ ಠಾಕ್ರೆ
6ನೇ ವೇತನ ಆಯೋಗ ಜಾರಿಗೆ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಹಾಗೂ ವೇತನ ಪರಿಷ್ಕರಣೆ, ಬಾಕಿ ವೇತನ ಪಾವತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಬಿಎಂಟಿಸಿ, ಕೆಎಸ್ಆರ್ ಟಿಸಿ, ಎನ್ ಡಬ್ಲ್ಯೂ ಕೆ ಆರ್ ಟಿ ಸಿ, ಎನ್ ಇ ಕೆ ಆರ್ ಟಿ ಸಿ ಸಿಬ್ಬಂದಿ ಕುಟುಂಬ ಸಮೇತರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.