alex Certify ಪ್ರಯಾಣಿಕ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಕಳೆದ ಆರು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ಸಂಸ್ಥೆಯ ಬೆರಣಿಕೆಯ ಬಸ್ಸುಗಳಷ್ಟೇ ಸಂಚಾರ ನಡೆಸುತ್ತಿವೆ. ಇದರಿಂದ ಪ್ರಯಾಣಿಕರಿಗೆ ತೀವ್ರ ಅನಾನುಕೂಲವಾಗಿದೆ.

ಇದರ ಮಧ್ಯೆ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಸರ್ಕಾರ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಇದೀಗ ಖಾಸಗಿ ಪ್ರಯಾಣಿಕ ವಾಹನಗಳ ಮಾಲೀಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಏ. 18 ರಂದು ಮಹತ್ವದ ಸಭೆ

ಹೊಸ ವಾಹನಗಳ ನೋಂದಣಿ ಹೊರತುಪಡಿಸಿ ಇತರ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಅನ್ವಯವಾಗುವಂತೆ ಏಪ್ರಿಲ್ 15ರೊಳಗೆ ಪಾವತಿಸಬೇಕಾಗಿದ್ದ ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಏಪ್ರಿಲ್ 30 ರವರೆಗೆ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...