alex Certify ಪ್ರವಾಸಿಗರನ್ನು ಸೆಳೆಯುತ್ತೆ ಶ್ರವಣಬೆಳಗೊಳದ ʼಬಾಹುಬಲಿʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರನ್ನು ಸೆಳೆಯುತ್ತೆ ಶ್ರವಣಬೆಳಗೊಳದ ʼಬಾಹುಬಲಿʼ

ಏಷ್ಯ ಖಂಡದಲ್ಲಿಯೇ ಅತಿ ಎತ್ತರದ ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಮೂರ್ತಿ ಇರುವುದು ಶ್ರವಣಬೆಳಗೊಳದಲ್ಲಿ.

ಹಾಸನ ಜಿಲ್ಲೆಯ ಐತಿಹಾಸಿಕ ಧಾರ್ಮಿಕ, ಪ್ರವಾಸಿ ತಾಣವಿದು. ಶ್ರವಣ ಬೆಳಗೊಳದಲ್ಲಿ ವಿಶ್ವವಿಖ್ಯಾತ 17.4 ಮೀ (57)  ಅಡಿ ಎತ್ತರದ ಬಾಹುಬಲಿಯ ಮೂರ್ತಿ ಇದೆ. ಇದು ಜೈನರ ಧಾರ್ಮಿಕ ಕೇಂದ್ರವಾದರೂ, ಲಕ್ಷಾಂತರ ಪ್ರವಾಸಿಗರು ಇಲ್ಲಿ ಬಂದು ಪೂಜೆ ಸಲ್ಲಿಸುತ್ತಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಈ ಕೇಂದ್ರವು ಬೆಂಗಳೂರಿನಿಂದ 148 ಕಿ.ಮೀ ದೂರದಲ್ಲಿದೆ. ಶ್ರವಣ ಬೆಳಗೊಳದ ವಿಂಧ್ಯಗಿರಿಯ ಮೇಲೆ ಕೆತ್ತಲಾದ ಈ ಮೂರ್ತಿಯನ್ನು ಚಾವುಂಡರಾಯನು ಕ್ರಿ.ಶ.973 ರಲ್ಲಿ ಕೆತ್ತಿಸಿದನು. ಅರಿಷ್ಟ ನೇಮಿ ಎಂಬ ಶಿಲ್ಪಿ ಕೆತ್ತಿದನೆಂದು ಹೇಳಲಾಗುತ್ತದೆ.

ಕ್ಷೇತ್ರದಲ್ಲಿ ಜೈನ ಮಠವಿದ್ದು, ಮಠದ ಪಕ್ಕದಲ್ಲಿಯೇ ಪ್ರಾಚೀನವಾದ ಭಂಡಾರಿ ಹುಳ್ಳ ಬಸದಿ ಹಾಗೂ ಚಂದ್ರನಾಥ ಸ್ವಾಮಿಯ ಬಸದಿಯಿದೆ. ಪ್ರತಿ 12 ವರ್ಷಕ್ಕೊಮ್ಮೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಇತ್ತೀಚೆಗೆ 2018 ರಲ್ಲಿ ವಿಜೃಂಭಣೆಯಿಂದ ಮಹಾ ಮಸ್ತಕಾಭಿಷೇಕ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...