alex Certify ಪ್ರವಾಹದ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿಹೋದ ರೈತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಹದ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿಹೋದ ರೈತ

ವಿಜಯಪುರ: ವರುಣನ ಅಬ್ಬರಕ್ಕೆ ಉತ್ತರ ಕರ್ನಾಟಕದ ಜಿಲ್ಲೆಗಳು ತತ್ತರಿಸಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ಹೊಲಕ್ಕೆ ತೆರಳಿದ್ದ ರೈತರೊಬ್ಬರು ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಶಿವಪುರ ನಾಟೀಕಾರ ನೀರಿನಲ್ಲಿ ಕೊಚ್ಚಿಹೋದ ರೈತ. ವಿಜಯಪುರದ ದೇವರಹಿಪ್ಪರಗಿಯಲ್ಲಿ ಈ ಘಟನೆ ನಡೆದಿದ್ದು, ಜಮೀನಿಗೆ ಹೋಗಿ ಬರುವುದಾಗಿ ತೆರಳಿದ್ದ ರೈತ ಶಿವಪುತ್ರ, ಮಳೆಯಿಂದ ತುಂಬಿ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ರೈತನಿಗಾಗಿ ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...