alex Certify ಪ್ರಶಾಂತ್ ಸಂಬರಗಿಯ ಈ ಹೊಸ ಪೋಸ್ಟ್ ಅರ್ಥವೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಶಾಂತ್ ಸಂಬರಗಿಯ ಈ ಹೊಸ ಪೋಸ್ಟ್ ಅರ್ಥವೇನು…?

ಬೆಂಗಳೂರು: ಡ್ರಗ್ಸ್ ಜಾಲದ ವಿರುದ್ಧ ಧ್ವನಿಯೆತ್ತಿರುವ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಹೊಸ ಪೋಸ್ಟ್ ಇದೀಗ ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ಬಗ್ಗೆ ಇರುವ ಕುತೂಹಲವನ್ನು ಇಮ್ಮಡಿಗೊಳಿಸಿದೆ.

ಸಂಬರಗಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ’ಸಜನಿ’ ಎಂದು ಪೋಸ್ಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಹಿಂದೆ ಡ್ರಗ್ಸ್ ಜಾಲದಲ್ಲಿ ನಟಿ ಸಂಜನಾ ಪಾತ್ರದ ಬಗ್ಗೆ ಸುಳಿವು ನೀಡಿದ್ದ ಸಂಬರಗಿ, ಇತ್ತೀಚೆಗೆ ನಿರೂಪಕಿ ಅನುಶ್ರೀ ಕುರಿತಾಗಿಯೂ ನಿಗೂಢವಾಗಿ ಟ್ವೀಟ್ ಮಾಡಿದ್ದರು. ಇದೀಗ ಸಜನಿ ಎಂದು ಬರೆದಿರುವ ಅವರ ಪೋಸ್ಟ್ ಹೊಸ ಚರ್ಚೆಗೆ ಕಾರಣವಾಗಿದೆ.

ಸಜನಿ ಎಂಬುದು ಕನ್ನಡದ ಸಿನಿಮಾ ಕೂಡ ಆಗಿದ್ದು, ಇದರಲ್ಲಿ ನಟಿ ಶರ್ಮಿಳಾ ಮಾಂಡ್ರೆ ಅಭಿನಯಿಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಈಗ ಪ್ರಶಾಂತ್ ಸಂಬರಗಿ ಸಜನಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆಯುವ ಮೂಲಕ ಡ್ರಗ್ಸ್ ಜಾಲದ ಜೊತೆ ನಂಟಿರುವ ಇನ್ನೋರ್ವ ನಟಿಯ ಹೆಸರನ್ನು ಸೂಚ್ಯವಾಗಿ ಹೇಳಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...