ಬೆಂಗಳೂರು: ಸಿನಿಮಾ ವಿತರಕ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತನಿಖೆಗೆ ಆದೇಶಿಸಿದೆ.
ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಸಂಬರಗಿ ವಿರುದ್ಧ ಐಪಿಸಿ ಸೆಕ್ಷನ್ 120(B), 504, 463, 465, 506 ಸೆಕ್ಷನ್ ಗಳ ಅಡಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆಗೆ ಚಾಮರಾಜಪೇಟೆ ಠಾಣೆಯ ಪೊಲೀಸರಿಗೆ ನ್ಯಾಯಾಲಯ ಆದೇಶ ನೀಡಿದೆ.
ಸಂಬರಗಿ, ಜೂನ್ 08, 2019 ರಂದು ನಾನು ನಟಿ ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಿದ್ದಾರೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್ ಗಳಿರಬೇಕಲ್ಲಾ? ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳಿಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಎಲ್ಲದರ ಬಗ್ಗೆಯೂ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ನನ್ನ ವಿರುದ್ಧದ ಆರೋಪ ಸಾಬೀತಾದರೆ ಕರ್ನಾಟಕದಲ್ಲಿನ ನನ್ನ ಆಸ್ತಿಯನ್ನು ಸರ್ಕಾರಕ್ಕೆ ಬರೆದುಕೊಡಲು ಸಿದ್ಧ. ಸಿಸಿಬಿ ವಶದಲ್ಲಿರುವ ಸಂಜನಾರನ್ನು ಸರ್ಕಾರ ತನಿಖೆ ನಡೆಸಲಿ. ನನ್ನನ್ನೂ ತನಿಖೆ ನಡೆಸಲಿ ತನಿಖೆಗೆ ನಾನು ಸಹಕರಿಸಲು ಸಿದ್ಧ ಎಂದು ಶಾಸಕರು ತಿಳಿಸಿದ್ದಾರೆ.