ಮುಂಬೈ: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಅವರಿಗೆ ಸಿಸಿಬಿ ನೋಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಡ್ರಗ್ಸ್ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವ, ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದು, ಆದಿತ್ಯ ಆಳ್ವನಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಈ ನಿಟ್ಟಿನಲ್ಲಿ ಆದಿತ್ಯ ಆಳ್ವನ ಭಾವ ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ಮೇಲೆ ನಿನ್ನೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು. ಆದರೆ ಆದಿತ್ಯ ಆಳ್ವನ ಸುಳಿವು ಸಿಕ್ಕಿಲ್ಲ. ಆದಿತ್ಯ ಆಳ್ವ ತಲೆಮರೆಸಿಕೊಳ್ಳಲು ವಿವೇಕ್ ಒಬೆರಾಯ್ ಹಾಗೂ ಅವರ ಪತ್ನಿ ಪ್ರಿಯಾಂಕ ಸಹಾಯ ಮಾಡಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಾಗೂ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಇದೀಗ ಆದಿತ್ಯ ಸಹೋದರಿ ಪ್ರಿಯಾಂಕಾಗೆ ಸಿಸಿಬಿ ನೊಟೀಸ್ ನೀಡಿದೆ. ಶೀಘ್ರದಲ್ಲೇ ಪ್ರಿಯಾಂಕಾ ವಿಚಾರಣೆ ನಡೆಯಲಿದೆ.