ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ಪಿಯುಸಿ ಹಾಗೂ 10ನೇ ತರಗತಿ ಪರೀಕ್ಷೆಗಳು ಇದೀಗ ಯಶಸ್ವಿಯಾಗಿ ಪೂರ್ಣಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದು, ಈ ಕುರಿತು ಮಾಹಿತಿ ಇಲ್ಲಿದೆ.
ಪಿಯುಸಿ ಫಲಿತಾಂಶ ಮುಂದಿನ ವಾರ ಹಾಗೂ ಆಗಸ್ಟ್ ಎರಡನೇ ವಾರದಲ್ಲಿ 10ನೇ ತರಗತಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇನ್ನು ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಿಗದಿತ ದಿನಾಂಕಗಳಂದೇ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ ಈಗಾಗಲೇ ತಿಳಿಸಿದ್ದಾರೆ.