alex Certify ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ

ಬೆಂಗಳೂರು: ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಡ್ರಗ್ಸ್ ದಂಧೆಯಲ್ಲಿ ಫಾಝಿಲ್ ತಪ್ಪು ಮಾಡಿದ್ದರೆ ಆತನಿಗೆ ಶಿಕ್ಷೆ ಕೊಡಲಿ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಫಾಝಿಲ್ ನನಗೆ ಸಿಕ್ಕಿಲ್ಲ. ಡ್ರಗ್ಸ್ ದಂಧೆಯಲ್ಲಿ ಆತ ಭಾಗಿಯಾಗಿದ್ದರೆ ಆತನಿಗೆ ಗಲ್ಲು ಶಿಕ್ಷೆ ನೀಡಲಿ. ನಾನು ತಪ್ಪು ಮಾಡಿದ್ದರೆ ನನಗೆ ಗಲ್ಲು ಶಿಕ್ಷೆಯಾಗಲಿ ಎಂದರು.

ಕೊಲಂಬೋಗೆ ನಾನು ನನ್ನ ಕುಟುಂಬದ ಜತೆಯೂ ಹೋಗಿದ್ದೇನೆ. ಜೆಡಿಎಸ್ ಶಾಸಕರ ಜತೆಯೂ ಹೋಗಿದ್ದೇನೆ. ಮನಸ್ಸಿನ ನೆಮ್ಮದಿಗಾಗಿ ಪ್ರವಾಸಕ್ಕೆ ಹೋಗೋದು ತಪ್ಪಾ? ಪ್ರಶಾಂತ್ ಸಂಬರಗಿ ಮೊದಲು ಸಂಜನಾ ಜತೆ ನಾನು ಹೋಗಿದ್ದಾಗಿ ಆರೋಪಿಸಿದ್ದರು. ಈಗ ಫಾಝಿಲ್ ನನ್ನು ಹಿಡಿದುಕೊಂಡಿದ್ದಾರೆ. ನಾನು ಯಾವ ತಪ್ಪು ಮಾಡಿಲ್ಲ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ನನ್ನ ಬೆಳವಣಿಗೆ ಸಹಿಸಲಾಗದೇ ರಾಜಕೀಯ ದುರುದ್ದೇಶದಿಂದ ಆರೋಪ ಮಾಡಲಾಗುತ್ತಿದೆ. ಸಂಬರಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಡ್ರಗ್ಸ್ ಮಾಫಿಯಾ ಬಗ್ಗೆ ಪೊಲೀಸರು ತನಿಖೆ ನಡೆಸಲಿ. ನಂಬರ್ ಒನ್ ಪೊಲೀಸರು ಎಂದರೆ ಕರ್ನಾಟಕ ಪೊಲೀಸರು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...