ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟೀಸ್ ನೀಡಿದೆ. ಆದರೆ ಬಂಧನ ಭೀತಿಯಲ್ಲಿರುವ ರಮೇಶ್ ಜಾರಕಿಹೊಳಿ ಇಂದು ವಿಚಾರಣೆಗೆ ಹಾಜರಾಗುವುದು ಅನುಮಾನ ಎನ್ನಲಾಗಿದೆ.
ಸಿಡಿ ಯುವತಿ ವಿಶೇಷ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗದೇ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಕಳೆದ ಮೂರು ದಿನಗಳಿಂದ ಜಾರಕಿಹೊಳಿ ಸುಳಿವಿಲ್ಲ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸುವಂತೆ ಯುವತಿ ಪರ ವಕೀಲರು ಪಟ್ಟು ಹಿಡಿದ್ದಾರೆ. ಅಲ್ಲದೇ ಎಫ್ಐಆರ್ ದಾಖಲಾದರೂ ಆರೋಪಿಯನ್ನು ಬಂಧಿಸದೇ ಓಡಾಡಲು ಬಿಟ್ಟಿರುವುದು ತನಿಖಾಧಿಕಾರಿಗಳು ಆರೋಪಿಗೆ ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರೋಡ್ ಶೋ, ಸಾರ್ವಜನಿಕ ಸಭೆ ನಂತರ ಡಾಬಾದಲ್ಲಿ ಭೋಜನ ಸವಿದ ಅಮಿತ್ ಶಾ, ಸಿ.ಟಿ. ರವಿ
ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಇಂದು ವಿಚಾರಣೆಗೆ ಹಾಜರಾದರೆ ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ಹಾಗಾಗಿ ರಮೇಶ್ ಜಾರಕಿಹೊಳಿ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರಾ ಅಥವಾ ವಕೀಲರನ್ನು ಕಳುಹಿಸಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಲಿದ್ದಾರಾ ಎಂಬ ಕುತೂಹಲ ಮೂಡಿದೆ. ಇನ್ನೊಂದೆಡೆ ಅಜ್ಞಾತರಾಗಿರುವ ರಮೇಶ್ ಜಾರಕಿಹೊಳಿ ನಿರೀಕ್ಷಣಾ ಜಾಮೀನಿಗೂ ಕೂಡ ಅರ್ಜಿ ಸಲ್ಲಿಸದೇ ಇರುವುದು ರಮೇಶ್ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲಕ್ಕೆ ಕಾರಣವಾಗಿದೆ.