alex Certify ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ ಎಂದ ಶಾಸಕ ಸೋಮಶೇಖರ್ ರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ ಎಂದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಿರುವ ಸಚಿವ ಆನದ್ ಸಿಂಗ್ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿರುವುದು ಬೇಡ. ಜಿಲ್ಲಾ ಉಸ್ತುವಾರಿಯನ್ನು ಬದಲಿಸುವಂತೆ ಬಳ್ಳಾರಿಯ 5 ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಲಿದ್ದೇವೆ ಎಂದು ಶಾಸಕ ಸೋಮಶೇಖರ್ ರೆಡ್ದಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಸೋಮಶೇಖರ್ ರೆಡ್ಡಿ, ಶ್ರೀರಾಮುಲು ಅವರನ್ನು ಬಳ್ಳಾರಿ ಉಸ್ತುವಾರಿಯನ್ನಾಗಿ ಮಾಡಬೇಕು. ಇದಕ್ಕೆ ಸಿಎಂ ಒಪ್ಪದಿದ್ದರೆ ಬೇರೆಯವರಿಗೆ ಕೊಡಿ ಎಂದು ಹೇಳುತ್ತೇವೆ. ಒಂದು ವೇಳೆ ನನಗೆ ಉಸ್ತುವಾರಿ ಸ್ಥಾನ ನೀಡಿದರೂ ನಿಭಾಯಿಸಲು ಸಿದ್ಧನಿದ್ದೇನೆ ಎಂದರು.

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ; ಮಾಜಿ ಪ್ರಧಾನಿ ದೇವೇಗೌಡ ಭವಿಷ್ಯ

ಕೃಷ್ಣದೇವರಾಯರು ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಣೆ ಮಾಡಿದರು. ಆದರೆ ಆನಂದ್ ಸಿಂಗ್ ವಿಜಯನಗರ ಸಾಮ್ರಾಜ್ಯವನ್ನು 5 ತಾಲೂಕುಗಳಿಗೆ ಸೀಮಿತಗೊಳಿಸಿದರು. ಸಾಮ್ರಾಜ್ಯವನ್ನು ಕಡಿಮೆಗೊಳಿಸಿದ ಕೀರ್ತಿ ಆನಂದ್ ಸಿಂಗ್ ಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ಹಂಪಿಯನ್ನೂ ಜಿಲ್ಲೆ ಮಾಡಿ ಎಂಬ ಬೇಡಿಕೆ ಇಡಬಹುದು ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...