alex Certify ಬಸ್ ಗಳ ಮೇಲೆ ನಿಮಗ್ಯಾಕೆ ಸಿಟ್ಟು ಎಂದು ಪ್ರಶ್ನಿಸಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಗಳ ಮೇಲೆ ನಿಮಗ್ಯಾಕೆ ಸಿಟ್ಟು ಎಂದು ಪ್ರಶ್ನಿಸಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಕೇಂದ್ರ ಸರ್ಕಾರ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ರಾಜ್ಯದಲ್ಲಿ ಸರ್ಕಾರ, ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಿದೆ. ಪ್ರಯಾಣದ ಸಂದರ್ಭದಲ್ಲಿ ಪ್ರಯಾಣಿಕರು ನಿಯಾಮಾವಳಿಗಳನ್ನು ಪಾಲಿಸಬೇಕಿದೆ.

ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಪ್ರಯಾಣದ ವೇಳೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕಿದೆ. ಆದರೆ ಕೆಲ ಬಸ್ಸುಗಳಲ್ಲಿ ಈ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದ್ದು, ಇದನ್ನು ಮಾಧ್ಯಮಗಳು ವರದಿ ಮಾಡಿದ್ದವು.

ಹೀಗಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಬೈಕುಗಳಲ್ಲಿ ಇಬ್ಬರು, ಮೂವರು ಸವಾರಿ ಮಾಡುತ್ತಾರೆ. ವಿಮಾನದಲ್ಲಿಯೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುತ್ತಿಲ್ಲ. ಬಸ್ಸುಗಳ ಮೇಲೆ ಮಾತ್ರ ನಿಮಗೆ ಯಾಕೆ ಸಿಟ್ಟು ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದ್ದಾರೆ. ಅಲ್ಲದೇ ಜೂನ್ 1ರ ಬಳಿಕ ಎಲ್ಲ ಸೀಟುಗಳಲ್ಲಿ ಪ್ರಯಾಣಿಕರು ಪ್ರಯಾಣಿಸಲು ಅವಕಾಶ ಮಾಡಿಕೊಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಒಪ್ಪಿಗೆ ಸೂಚಿಸಿದರೆ ಆ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...