alex Certify ಬಾವಿ ಅಥವಾ ಕೊಳವೆ ಬಾವಿ ಕೊರೆಸುವವರಿಗೊಂದು ಮಹತ್ವದ ಮಾಹಿತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾವಿ ಅಥವಾ ಕೊಳವೆ ಬಾವಿ ಕೊರೆಸುವವರಿಗೊಂದು ಮಹತ್ವದ ಮಾಹಿತಿ…!

ಒಂದು ಬಾವಿಯಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದ್ದಂತೆಯೇ ಮತ್ತೊಂದು ಕಡೆ ಬಾವಿ ಕೊರೆಸುತ್ತಿದ್ದು ಎಲ್ಲಾ ಕಡೆಗಳಲ್ಲಿ ಸಾಮಾನ್ಯವಾಗಿತ್ತು. ಆದರೆ ಇದರಿಂದ ಮುಂದೆ ತೊಂದರೆಯಾಗುತ್ತದೆ ಎಂಬ ನಿಟ್ಟಿನಲ್ಲಿ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಮಹತ್ವದ ಅಧಿಸೂಚನೆಯೊಂದನ್ನು ಹೊರಡಿಸಿದೆ.

ಇನ್ಮುಂದೆ ಯಾರಾದರೂ ಬಾವಿ ಅಥವಾ ಕೊಳವೆ ಬಾವಿ ಕೊರೆಸಬೇಕು ಎಂದರೆ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಸಮಿತಿಯಿಂದ ಅನುಮತಿ ಪಡೆಯಬೇಕು. ಅನುಮತಿ ಪಡೆಯದೇ ಬಾವಿ ಕೊರೆಸಿದರೆ ಅಂತವರನ್ನು ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಆದೇಶ ಹೊರಡಿಸಲಾಗಿದೆ. ಈ ಆದೇಶ 15 ಜಿಲ್ಲೆಗಳಿಗೆ ಅನ್ವಯಿಸಲಿದೆ.

ರಾಜ್ಯದ 15 ಜಿಲ್ಲೆಗಳನ್ನು ಅಂತರ್ಜಲ ಅತಿ ಬಳಕೆಯ ಜಿಲ್ಲೆಗಳೆಂದು ಗುರುತಿಸಿದೆ. ಅವುಗಳೆಂದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೋಲಾರ, ರಾಮನಗರ, ತುಮಕೂರು ಈ 15 ಜಿಲ್ಲೆಗಳಲ್ಲಿನ ಒಟ್ಟು 45 ತಾಲೂಕುಗಳಿಗೆ ಈ ಆದೇಶ ಅನ್ವಯವಾಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...