ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಸಂಜೆ 5 ಗಂಟೆಗೆ ಫೇಸ್ ಬುಕ್ ಲೈವ್ ಹಾಗೂ ಯೂ ಟ್ಯೂಬ್ ನಲ್ಲಿ ಬರಲಿದ್ದು, ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧೆಡೆ ಲಾಕ್ ಡೌನ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ ಡೌನ್ ಅಂತ್ಯಗೊಳ್ಳುತ್ತಿದ್ದು, ಹೀಗಾಗಿ ಯಡಿಯೂರಪ್ಪನವರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆಂಬುದು ಕುತೂಹಲಕ್ಕೆ ಕಾರಣವಾಗಿದೆ.
ಅಲ್ಲದೇ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಸೂಕ್ತ ಸೌಲಭ್ಯ ಹಾಗೂ ಚಿಕಿತ್ಸೆ ಲಭ್ಯವಾಗುತ್ತಿಲ್ಲವೆಂಬ ಆರೋಪಗಳಿದ್ದು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರು ಮಾತನಾಡುವ ನಿರೀಕ್ಷೆಯಿದೆ.