alex Certify ಬಿಗ್‌ ನ್ಯೂಸ್:‌ ಜೂನ್‌ ತಿಂಗಳಲ್ಲಿ SSLC ಪರೀಕ್ಷೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್:‌ ಜೂನ್‌ ತಿಂಗಳಲ್ಲಿ SSLC ಪರೀಕ್ಷೆ…?

ಕರೋನಾ ಸೋಂಕು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಬಾಕಿ ಉಳಿದುಕೊಂಡಿದ್ದ ದ್ವಿತೀಯ ಪಿಯುಸಿಯ ಒಂದು ವಿಷಯದ ಪರೀಕ್ಷೆಯೂ ಮುಂದೂಡಿಕೆಯಾಗಿದೆ.

ಪರೀಕ್ಷೆ ಯಾವಾಗ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿರುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ಕರೋನಾ ಸೋಂಕಿನ ಪ್ರಮಾಣ ಮುಂದಿನ ದಿನಗಳಲ್ಲಿ ಇಳಿಕೆಯಾಗಲಿದೆ ಎನ್ನಲಾಗುತ್ತಿದ್ದು, ಹೀಗಾಗಿ ಜೂನ್‌ ತಿಂಗಳಿನಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಈಗಾಗಲೇ ಸೂಚಿಸಲಾಗಿದ್ದು, ಪರೀಕ್ಷೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಲಾಗುತ್ತದೆ. ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್‌ ಗಳನ್ನು ಇರಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...