alex Certify ಬಿಗ್‌ ನ್ಯೂಸ್:‌ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು – ಅನುತ್ತೀರ್ಣಗೊಂಡ ಎಲ್ಲ ವಿದ್ಯಾರ್ಥಿಗಳೂ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್:‌ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು – ಅನುತ್ತೀರ್ಣಗೊಂಡ ಎಲ್ಲ ವಿದ್ಯಾರ್ಥಿಗಳೂ ಪಾಸ್

ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.  ಜುಲೈ 16 ರಿಂದ 27ರವರೆಗೆ ನಿಗದಿಯಾಗಿದ್ದ ಪೂರಕ ಪರೀಕ್ಷೆಗಳನ್ನು ರದ್ದುಪಡಿಸಲು ಇಂದು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸುಮಾರು 60 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಿದ್ದು, ಕಾಲೇಜು ಹಂತದಲ್ಲಿ ಪರೀಕ್ಷೆಗಳನ್ನು ನಿರ್ವಹಿಸಿ ಇದೇ 30 ರಂದು ಫಲಿತಾಂಶವನ್ನು ಪ್ರಕಟಿಸಲು ಈ ಹಿಂದೆ ನಿರ್ಧರಿಸಲಾಗಿತ್ತು.

ಕೋವಿಡ್ ಸೊಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳ ಪರೀಕ್ಷೆಯನ್ನು ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುವುದು. ಪರೀಕ್ಷೆಯಲ್ಲಿ ಉತ್ತೀರ್ಣತೆಯನ್ನು ಪಡೆಯಲು ಅವಶ್ಯಕತೆಯಿರುವ ಕನಿಷ್ಠ ಅಂಕಗಳನ್ನು ಕಾಲೇಜು ಹಂತದಲ್ಲಿಯೇ ನೀಡಲಾಗುವುದು.

ಹಾಜರಾತಿ ಕೊರತೆಯಿಲ್ಲದ, ಅನಿವಾರ್ಯ ಸಂದರ್ಭದಲ್ಲಿ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳು ಪ್ರಾರಂಭವಾದ ಬಳಿಕ ದ್ವಿತೀಯ ಪಿಯುಸಿಯ ಪ್ರಥಮ ಕಿರುಪರೀಕ್ಷೆಗೂ ಪೂರ್ವದಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣವಾದ ವಿಷಯಗಳಿಗೆ ಮತ್ತೊಮ್ಮೆ ಕಾಲೇಜು ಹಂತದಲ್ಲಿ ಕಿರುಪರೀಕ್ಷೆಯನ್ನು ನಡೆಸಿ ಅವರ ಕಲಿಕೆಯ ಮಟ್ಟವನ್ನು ಮೌಲ್ಯಮಾಪನ ಮಾಡಲಾಗುವುದು.

ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣಗೊಳ್ಳುವರು ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...