alex Certify ಬಿಗ್‌ ನ್ಯೂಸ್:‌ ಮದ್ಯ ಮಾರಾಟಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್:‌ ಮದ್ಯ ಮಾರಾಟಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಲಾಕ್‌ ಡೌನ್‌ ಕಾರಣಕ್ಕೆ ಇದುವರೆಗೂ ಬಂದ್‌ ಆಗಿದ್ದ ಮದ್ಯದಂಗಡಿಗಳು ಮೇ 4 ರಿಂದ ಮತ್ತೆ ತೆರೆಯಲಿವೆ. ಗ್ರೀನ್‌ ಜೋನ್‌ ನಲ್ಲಿ ಮದ್ಯದಂಗಡಿ ತೆರೆಯಲು ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಇದಕ್ಕೆ ಕೆಲವೊಂದು ನಿಬಂಧನೆಗಳನ್ನು ವಿಧಿಸಿದೆ.

ಮದ್ಯ ಮಾರಾಟದಂಗಡಿಯಲ್ಲಿ ಖರೀದಿ ವೇಳೆ ಒಮ್ಮೆಲೆ 5 ಜನರಿಗೆ ಮಾತ್ರ ಅವಕಾಶವಿದ್ದು, ಈ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ 6 ಅಡಿಯನ್ನು ಕಾಪಾಡಿಕೊಳ್ಳಬಹುದಾಗಿದೆ.

ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಮಟ್ಟದ ಆದಾಯ ಬರುತ್ತಿದ್ದು, ಇದೀಗ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿರುವ ಕಾರಣ ಮೇ 4 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಆರಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...