ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಕರ್ನಾಟಕದಲ್ಲೂ ತನ್ನ ಆರ್ಭಟ ತೋರಿಸುತ್ತಿದೆ. ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಇದರ ಮಧ್ಯೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ದೇವೇಗೌಡ ದಂಪತಿಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರುಗಳಿಗೆ ಯಾವುದೇ ಕೊರೊನಾ ಗುಣಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದಾರೆಂದು ಹೇಳಲಾಗಿದೆ.