alex Certify ಬಿಗ್‌ ನ್ಯೂಸ್:‌ ಸರ್ಕಾರದ ಆದೇಶ ಗಾಳಿಗೆ ತೂರಿರುವ ಖಾಸಗಿ ಆಸ್ಪತ್ರೆ ವಿರುದ್ದ ಕ್ರಮಕ್ಕೆ ಮುಂದಾದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್:‌ ಸರ್ಕಾರದ ಆದೇಶ ಗಾಳಿಗೆ ತೂರಿರುವ ಖಾಸಗಿ ಆಸ್ಪತ್ರೆ ವಿರುದ್ದ ಕ್ರಮಕ್ಕೆ ಮುಂದಾದ ಸರ್ಕಾರ

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಸಹ ಸರ್ಕಾರದೊಂದಿಗೆ ಕೈ ಜೋಡಿಸುವಂತೆ ಕೇಳಲಾಗಿತ್ತು. ಅಲ್ಲದೆ ಈ ಕುರಿತು ಸರಣಿ ಸಭೆಗಳನ್ನು ನಡೆಸಲಾಗಿದ್ದು, ಶೇ.50 ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ಬಿಟ್ಟುಕೊಡಬೇಕೆಂದು ಸೂಚಿಸಲಾಗಿತ್ತು.

ಜೊತೆಗೆ ವಿವಿಧ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಲಾಗಿತ್ತು. ಸಭೆಯಲ್ಲಿ ಈ ಎಲ್ಲ ಸೂಚನೆಗಳಿಗೆ ಸಮ್ಮತಿಸಿದ್ದ ಕೆಲ ಖಾಸಗಿ ಆಸ್ಪತೆಗಳು ಬಳಿಕ ಯಾವುದನ್ನೂ ಪಾಲಿಸದೆ ಎಲ್ಲವನ್ನೂ ಗಾಳಿಗೆ ತೂರಿದ್ದವು.

ಈ ಕುರಿತು ಮಾಧ್ಯಮಗಳಿಗೆ ನಿರಂತರವಾಗಿ ಸುದ್ದಿ ಪ್ರಕಟಗೊಂಡ ಬಳಿಕ ಇದೀಗ ಸರ್ಕಾರ, ನಿಯಮ ಬಾಹಿರವಾಗಿ ವರ್ತಿಸಿರುವ ಖಾಸಗಿ ಆಸ್ಪತ್ರೆ ವಿರುದ್ದ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಡಾ. ಸುಧಾಕರ್‌, ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...