alex Certify ಬಿಗ್‌ ನ್ಯೂಸ್: ಮೇ 30ರ ಬಳಿಕ ಬಸ್ ಸಂಚಾರದಲ್ಲಿ ಬದಲಾವಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ಮೇ 30ರ ಬಳಿಕ ಬಸ್ ಸಂಚಾರದಲ್ಲಿ ಬದಲಾವಣೆ ಸಾಧ್ಯತೆ

ಲಾಕ್‌ಡೌನ್‌ನಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಆದರೆ ಇತ್ತೀಚೆಗೆ ಬಂದ ಹೊಸ ಮಾರ್ಗಸೂಚಿ ಪ್ರಕಾರ ಸರ್ಕಾರದ ಬೊಕ್ಕಸ ತುಂಬಿಸಲು ಹಾಗೂ ಪ್ರಯಾಣಿಕರಿಗೆ ಅನುಕೂಲ ಆಗಲಿ ಅಂತ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಇನ್ನು ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆಗುತ್ತಿಲ್ಲ. ಇದೀಗ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರಕ್ಕೆ ಸರ್ಕಾರ ಚಿಂತನೆ ಮಾಡುತ್ತಿದೆ.

ಹೌದು, ಈ ಬಗ್ಗೆ ಹೊಸಕೋಟೆಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸದ್ಯ ರಾಜ್ಯದಲ್ಲಿ ಈಗಾಗಲೇ ಬಸ್ ಸಂಚಾರ ಆರಂಭವಾಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ರಾಜ್ಯದಲ್ಲಿ ಕೆಲವು ಕಡೆ ರಾತ್ರಿ ಸಂಚಾರ ಆರಂಭವಾಗಿದೆ. ಇಡೀ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಕಡೆ ರಾತ್ರಿ ವೇಳೆ ಬಸ್ ಸಂಚಾರ ಮಾಡಲು ಅನುವು ಮಾಡಲಾಗುತ್ತದೆ ಎಂದಿದ್ದಾರೆ.

ಮೇ 30 ರ ನಂತರ ಹೊಸ ಮಾರ್ಗಸೂಚಿ ಬರಲಿದೆ. ಮಾರ್ಗಸೂಚಿಯ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು. ಹಾಗೂ ಆಟೋ ಚಾಲಕರಿಗೆ 5 ಸಾವಿರ ನೀಡುವ ವಿಚಾರವಾಗಿ ಮಾತನಾಡಿದ ಅವರು, ಕೆಲವೊಂದು ಕಾರಣಗಳಿಂದ ಅವರಿಗೆ ಹಣ ಸೇರುವುದು ತಡವಾಗಿತ್ತು. ಆದರೆ ಟೆಕ್ನಿಕಲ್ ಸಮಸ್ಯೆ ಬಗೆಹರಿದಿದೆ ಆದಷ್ಟು ಬೇಗ ಹಣ ಅವರ ಕೈ ಸೇರುತ್ತೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...