alex Certify ಬಿಗ್‌ ಬ್ರೇಕಿಂಗ್:‌ ಕೇಂದ್ರ ಸಚಿವ ಸುರೇಶ್‌ ಅಂಗಡಿ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ಬ್ರೇಕಿಂಗ್:‌ ಕೇಂದ್ರ ಸಚಿವ ಸುರೇಶ್‌ ಅಂಗಡಿ ಇನ್ನಿಲ್ಲ

ಕೇಂದ್ರ ಸಚಿವ ಸುರೇಶ್‌ ಅಂಗಡಿ ವಿಧಿವಶರಾಗಿದ್ದಾರೆ. ಕೊರೊನಾ ಕಾರಣಕ್ಕೆ ನವದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ.

65 ವರ್ಷದ ಬೆಳಗಾವಿ ಸಂಸದ 15 ದಿನಗಳ ಹಿಂದೆ ಉಸಿರಾಟದ ಸಮಸ್ಯೆ ತಲೆದೋರಿದ ಹಿನ್ನಲೆಯಲ್ಲಿ ಆಸ್ಪತ್ರೆಗ ದಾಖಲಾಗಿದ್ದರು.

ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದ ಅವರು, ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸದಾ ಲವಲವಿಕೆಯಿಂದ ಇರುತ್ತಿದ್ದ ಸುರೇಶ್‌ ಅಂಗಡಿಯವರು ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದರು.

ಸುರೇಶ್‌ ಅಂಗಡಿಯವರ ಹಠಾತ್‌ ನಿಧನ ರಾಜ್ಯದ ಜನತೆಯನ್ನು ದಿಗ್ಬ್ರಮೆಗೊಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...