ಸಚಿವ ಆನಂದ್ ಸಿಂಗ್ ಅವರ ಬೇಡಿಕೆಗೆ ಕೊನೆಗೂ ಮನ್ನಣೆ ಸಿಗುವ ಕಾಲ ಸನ್ನಿಹಿತವಾಗಿದೆ. ವಿಜಯನಗರ ಜಿಲ್ಲೆ ಸ್ಥಾಪನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಗಲಿದ್ದು, ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಜಿಲ್ಲೆಯ ಉದಯವಾಗಲಿದೆ.
ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ಪ್ರತ್ಯೇಕ ವಿಜಯನಗರ ಜಿಲ್ಲೆ ಸ್ಥಾಪನೆಗೆ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಆನಂದ್ ಸಿಂಗ್ ಅವರ ಬೇಡಿಕೆಗೆ ಮನ್ನಣೆ ನೀಡಿದ್ದಾರೆ.