ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲು ಮುಂದಾಗಿದ್ದ ರಾಜ್ಯ ಸರ್ಕಾರ ಈಗ ತನ್ನ ನಿಲುವು ಬದಲಿಸಿದೆ. ಕೆಲವೊಂದು ನಿಬಂಧನೆಗಳೊಂದಿಗೆ ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಟಾಪನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಈ ಕುರಿತು ಮುಖ್ಯಮಂತ್ರಿಗಳ ಕಛೇರಿಯಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು, ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮುನ್ನ ಸ್ಥಳೀಯಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಅಲ್ಲದೇ ವಾರ್ಡ್ ಗೆ ಒಂದು ಗಣಪತಿಯನ್ನು ಮಾತ್ರ ಪ್ರತಿಷ್ಟಾಪಿಸಬಹುದಾಗಿದೆ. ಇನ್ನು ಗ್ರಾಮಗಳಲ್ಲಿ ಕೂಡಾ ಒಂದು ಗಣಪತಿಯನ್ನು ಪ್ರತಿಷ್ಟಾಪಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಅದಷ್ಟು ಕಡಿಮೆ ಸಂಖ್ಯೆಯಲ್ಲಿ ಜನ ಸೇರಬೇಕು ಎಂದು ತಿಳಿಸಲಾಗಿದೆ. ಒಮ್ಮೆಲೆ 20 ಕ್ಕಿಂತ ಅಧಿಕ ಮಂದಿ ಸೇರದಂತೆ ಸೂಚಿಸಲಾಗಿದೆ.