alex Certify ಬಿಗ್ ನ್ಯೂಸ್: ಈ ಬಾರಿ ನಿಗದಿಯಂತೆ ನಡೆಯುವುದಿಲ್ಲ SSLC – ಪಿಯುಸಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಈ ಬಾರಿ ನಿಗದಿಯಂತೆ ನಡೆಯುವುದಿಲ್ಲ SSLC – ಪಿಯುಸಿ ಪರೀಕ್ಷೆ

ಕೊರೊನಾ ಮಹಾಮಾರಿ ಶೈಕ್ಷಣಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಫೆಬ್ರವರಿ ತಿಂಗಳಿನಲ್ಲಿ ದೇಶದಲ್ಲಿ ವಕ್ಕರಿಸಿಕೊಂಡ ಈ ಮಹಾಮಾರಿ ನಿಯಂತ್ರಿಸಲು ಮಾರ್ಚ್ ನಿಂದ ಬಹುಕಾಲದವರೆಗೆ ದೇಶದಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ಈಗ ಅನ್ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ಶಾಲಾ – ಕಾಲೇಜುಗಳನ್ನು ಆರಂಭಿಸಲಾಗಿಲ್ಲ.

ಹೀಗಾಗಿ ಅಕ್ಟೋಬರ್ ತಿಂಗಳು ಬಂದರೂ ಪ್ರಸಕ್ತ ವರ್ಷದ ಶೈಕ್ಷಣಿಕ ಆರಂಭಿಸಲು ಸಾಧ್ಯವಾಗಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ಮುಂದೂಡಿಕೆಯಾಗಿದ್ದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳನ್ನು ಆ ಬಳಿಕ ಬಹಳಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಡೆಸಲಾಗಿತ್ತು.

ಸಾಮಾನ್ಯವಾಗಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳು ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ನಡೆಯುತ್ತಿದ್ದು, ಆದರೆ ಈ ಬಾರಿ ಶೈಕ್ಷಣಿಕ ವರ್ಷವೇ ಆರಂಭವಾಗದಿರುವ ಕಾರಣ 2021 ನೇ ಸಾಲಿನ ಈ ಪರೀಕ್ಷೆಗಳು ಈ ಮೊದಲಿನಂತೆ ನಿಗದಿತ ಅವಧಿಯಲ್ಲಿ ನಡೆಯುವುದು ಅನುಮಾನವಾಗಿದೆ. ಹೀಗಾಗಿ ಪರೀಕ್ಷೆ ಮುಂದೂಡುವುದು ಅನಿವಾರ್ಯವಾಗಿದ್ದು, ಇದು ಶೈಕ್ಷಣಿಕ ವ್ಯವಸ್ಥೆ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...