alex Certify ಬಿಗ್ ನ್ಯೂಸ್: ಉನ್ನತ ಶಿಕ್ಷಣದ ಅಂತಿಮ ವರ್ಷದ ಪರೀಕ್ಷೆ ಮಾತ್ರ ನಡೆಸಲು ಕೇಂದ್ರದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಉನ್ನತ ಶಿಕ್ಷಣದ ಅಂತಿಮ ವರ್ಷದ ಪರೀಕ್ಷೆ ಮಾತ್ರ ನಡೆಸಲು ಕೇಂದ್ರದ ನಿರ್ಧಾರ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಪರೀಕ್ಷೆ ಕುರಿತಂತೆ ಕೇಂದ್ರ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ದೇಶದ 45 ಸಾವಿರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೊದಲ ಮತ್ತು ದ್ವಿತೀಯ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ರದ್ದು ಮಾಡಿ, ಅಂತಿಮ ವರ್ಷದ ಪರೀಕ್ಷೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಈ ವಿಷಯ ತಿಳಿಸಿದ್ದು, ಮೊದಲ ವರ್ಷದ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಸಾಧನೆ ಆಧರಿಸಿ ಮುಂದಿನ ವರ್ಷಕ್ಕೆ ತೇರ್ಗಡೆ ಮಾಡಲಾಗುತ್ತದೆ. ಅದೇ ರೀತಿ ಎರಡನೇ ವರ್ಷದ ವಿದ್ಯಾರ್ಥಿಗಳು ಹಿಂದಿನ ವರ್ಷ ಮತ್ತು ಇಂಟರ್ನಲ್ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಗಳಿಕೆ ಆಧಾರದ ಮೇಲೆ ಅಂತಿಮ ವರ್ಷಕ್ಕೆ ತೇರ್ಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಯ ನಡೆಸಲು ನಿರ್ಧರಿಸಲಾಗಿದ್ದು, ಇದನ್ನು ಜುಲೈನಲ್ಲಿ ನಿಗದಿಪಡಿಸಲಾಗಿದೆ. ಆದರೆ ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಆ ಸಂದರ್ಭದಲ್ಲಿ ನಿಯಂತ್ರಣಕ್ಕೆ ಬಾರದಿದ್ದರೆ ಆ ಬಳಿಕ ಪರೀಕ್ಷೆ ಮುಂದೂಡುವ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...