ಲಾಕ್ ಡೌನ್ ನಡುವೆಯೂ ಸರ್ಕಾರದ ಆದೇಶದಂತೆ ಸೋಮವಾರದಿಂದ ಮದ್ಯದಂಗಡಿಗಳು ಆರಂಭವಾಗಿದ್ದವು. ಇದೀಗ ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್, ಪಬ್ ಗಳ ಆರಂಭಕ್ಕೂ ಸರ್ಕಾರ ಹಸಿರು ನಿಶಾನೆ ತೋರಿಸಿದೆ.
ಮದ್ಯ ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಪಾರ್ಸೆಲ್ ನೀಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮಾರಾಟದ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ.
ಸ್ಟಾಕ್ ಇರುವವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ 9ರಿಂದ ಸಂಜೆ 5 ರವರೆಗೆ ಮಾರಾಟ ಮಾಡಬಹುದಾಗಿದೆ. ಖರೀದಿಗೆ ಬರುವವರು ಮಾಸ್ಕ್ ಧರಿಸಿಕೊಂಡು ಬರುವಂತೆ ಸೂಚಿಸಲಾಗಿದೆ.