ರಾಜ್ಯಸಭಾ ಟಿಕೆಟ್ ಘೋಷಣೆಗೂ ಮುನ್ನ ಕೆಲ ಬಿಜೆಪಿ ಶಾಸಕರುಗಳು ಪ್ರತ್ಯೇಕ ಸಭೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಉಂಟು ಮಾಡಿತ್ತು. ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಬಿಜೆಪಿ ಹೈಕಮಾಂಡ್ ಹೊಸ ಮುಖಗಳಿಗೆ ಮಣೆ ಹಾಕಿದ್ದು, ಆ ಬಳಿಕ ಅತೃಪ್ತ ಶಾಸಕರು ತಣ್ಣಗಾಗಿದ್ದರು.
ಇದೀಗ ರಾಜಕೀಯ ಮತ್ತೆ ಚುರುಕು ಪಡೆದುಕೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಕೆಲ ಶಾಸಕರುಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯ ವೈಖರಿ ವಿರುದ್ಧ ದೂರು ನೀಡಿದ್ದಾರೆನ್ನಲಾಗಿದೆ.
ಕೇವಲ ಶಿವಮೊಗ್ಗ ಜಿಲ್ಲೆಗೆ ಮಾತ್ರ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ. ನಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಯಾವುದೇ ಅನುದಾನ ದೊರೆಯುತ್ತಿಲ್ಲ ಎಂದು ಶಾಸಕರು ತಿಳಿಸಿರುವುದಲ್ಲದೆ ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚಿಸುವಂತೆ ನಳಿನ್ ಕುಮಾರ್ ಕಟೀಲ್ ಅವರ ಬಳಿ ಮನವಿ ಮಾಡಿದ್ದಾರೆನ್ನಲಾಗಿದೆ.