alex Certify ಬಿಗ್ ನ್ಯೂಸ್: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟು…?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಹವಾಲಾ ನಂಟಿದೆಯಾ ಎಂಬ ಅನುಮಾನ ಕಾಡುತ್ತಿದೆ. ಡ್ರಗ್ಸ್ ಕಿಂಗ್ ಪಿನ್ ವಿರೇನ್ ಖನ್ನಾ ವಿದೇಶಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿದ್ದ ಎನ್ನಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ಆರೋಪಿಯನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಸಿಸಿಬಿ ಕಚೇರಿಗೆ ಆಗಮಿಸಿರುವ ಇಡಿ ಸಹಾಯಕ ನಿರ್ದೇಶಕ ಬಸವರಾಜ್ ನೇತೃತ್ವದ ತಂಡ ಈಗಾಗಲೇ ವಿರೇನ್ ಖನ್ನಾ ಮನೆಯಲ್ಲಿ ಸಿಕ್ಕ ವಿದೇಶಿ ಕರೆನ್ಸಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ವಿದೇಶಗಳಿಗೆ ಅಕ್ರಮ ಹಣ ವರ್ಗಾವಣೆಯಾಗಿರುವ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಎರಡು ದಿನಗಳ ಹಿಂದೆ ಆರೋಪಿ ವಿರೇನ್ ಖನ್ನಾ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ 8 ದೇಶಗಳ ಕರೆನ್ಸಿ ಪತ್ತೆಯಾಗಿತ್ತು. ಅಲ್ಲದೇ ಅಕ್ರಮ ಹಣ ವರ್ಗಾವಣೆ ಬಗ್ಗೆಯೂ ಕೆಲ ಮಾಹಿತಿ ಸಿಕ್ಕಿದ್ದವು. ಈ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಹವಾಲಾ ಹಣದ ಲಿಂಕಿರುವ ಅನುಮಾನವಿದ್ದು, ಇಡಿ ಅಧಿಕಾರಿಗಳು ವಿರೇನ್ ಖನ್ನಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...